ಕೇರಳದಲ್ಲಿ ಭಾರೀ ಮಳೆಯ ಎಚ್ಚರಿಕೆ; ಕಾಸರಗೋಡು, ಕಣ್ಣೂರಿಗೆ ಆರೆಂಜ್ ಅಲರ್ಟ್

1 Min Read
1 Min Read

ಕೇರಳದಲ್ಲಿ ಭಾರೀ ಮಳೆಯ ಮುನ್ಸೂಚನೆ; ಕಾಸರಗೋಡು, ಕಣ್ಣೂರಿಗೆ ಆರೆಂಜ್ ಅಲರ್ಟ್

ಕೇರಳದಲ್ಲಿ ಮಳೆಯ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (IMD) ಆರೆಂಜ್ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಕೆಲವೆಡೆ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಇದೇ ವೇಳೆ, ರಾಜ್ಯದ ಇತರೆ ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ದಕ್ಷಿಣ ಕೇರಳ ಭಾಗಗಳಲ್ಲಿ ಇಂದು ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ನಿರೀಕ್ಷೆಯಿದೆ. ಆದರೆ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಕರಾವಳಿ ಪ್ರದೇಶದಲ್ಲಿ ಜುಲೈ 2ರವರೆಗೆ ಮೀನುಗಾರಿಕೆ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ.

ಹವಾಮಾನ ಇಲಾಖೆಯ ಎಚ್ಚರಿಕೆಯನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ಸಮುದ್ರಕ್ಕೆ ತೆರಳದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Share This Article
Leave a Comment